ಕಲ್ಲಂಗಡಿ ಹಣ್ಣಿನಲ್ಲಿರುವಷ್ಟು ನೀರಿನ ಪ್ರಮಾಣ ಬೇರಾವ ಹಣ್ಣಿನಲ್ಲೂ ಕಾಣಸಿಗದು. ಇದರ ಜ್ಯೂಸ್ ಹೊಟ್ಟೆಗೊಂದೇ ಅಲ್ಲಾ ಕಣ್ಣಿಗೂ ತಂಪು. ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿರುವುದರಿಂದ ಇದನ್ನು ಯಾರೂ ಸೇವಿಸಬಹುದು. ಅತ್ಯಲ್ಪ ಕ್ಯಾಲೊರಿಯನ್ನು ಹೊಂದಿರುವ ಹಣ್ಣು ಬಹೋಪಯೋಗಿಯೂ ಹೌದು. ಇದರಲ್ಲಿ ಪೊಟಾಶಿಯಂ ಹಾಗೂ ವಿಟಮಿನ್ ’ಸಿ’ ಅತ್ಯಧಿಕ ಪ್ರಮಾಣದಲ್ಲಿದ್ದು, ಇದರ ಸೇವನೆಯಿಂದ ರಕ್ತದೊತ್ತಡವನ್ನು ಕಡಿಮೆಗೊಳಿಸಬಹುದು. ಅದೂ ಅಲ್ಲದೇ ಹೃದ್‌ರೋಗಕ್ಕೆ, ಕೆಲವೊಂದು ಕ್ಯಾನ್ಸರ್ ಚಿಕಿತ್ಸೆಗೆ ಇದನ್ನು ಔಷಧಿಯನ್ನಾಗಿ ಬಳಸುವುದೂ ತಿಳಿದುಬಂದಿದೆ.
ಕಲ್ಲಂಗಡಿ ಹಣ್ಣಿನ ಹೆಚ್ಚಿನ ಉಪಯೋಗಗಳನ್ನು ತಿಳಿಯಲು ಈ ಕೆಳಗಿನ ಲಿಂಕ್‌ಗೆ ತಪ್ಪದೇ ಭೇಟಿಕೊಡಿ.
http://home.howstuffworks.com/watermelon3.htm
ಈ ಹಣ್ಣನ್ನು ತಿರುಳು ಸಹಿತ ನುಣ್ಣಗೆ ಬೀಸಿ ಲೇಪದಂತೆ ಮಾಡಿಕೊಂಡು ಮೈ, ಕೈಗೆ ಹಚ್ಚಿಕೊಂಡರೆ ತ್ವಚೆ ನುಣುಪಾಗುವುದು, ಕಲೆರಹಿತವಾಗುವುದು ಅಲ್ಲದೇ ಸುಕ್ಕುಗಳು ಕ್ರಮೇಣ ಮಾಯವಾಗುವುವು. ಉರಿಮೂತ್ರಕ್ಕೆ ಇದು ದಿವ್ಯೌಷಧಿಯಾಗಿದೆ. ಅಲ್ಲದೇ ಕಿಡ್ನಿ ಸ್ಟೋನ್ ತಡೆಗಟ್ಟಲೂ ಇದು ತುಂಬಾ ಸಹಕಾರಿಯಾಗಿರುವುದು ತಿಳಿದು ಬಂದಿದೆ.
ಕಲ್ಲಂಗಡಿ ಹಣ್ಣಿನಿಂದ ಪಾಯಸ, ದೋಸೆ ಹಾಗೂ ಜ್ಯೂಸ್‌ಗಳನ್ನು ಸಾಮಾನ್ಯವಾಗಿ ತಯಾರಿಸುತ್ತಾರೆ. ಪ್ರಸ್ತುತ ಇಲ್ಲಿ ಇದರ ತಿರುಳಿನಿಂದ ರುಚಿಕರವಾದ ದೋಸೆಯನ್ನು ತಯಾರಿಸುವ ವಿಧಾನವನ್ನು ವಿವರಿಸಿದ್ದೇನೆ. ಹಣ್ಣಿನ ಕೆಂಪಾದ ಮೇಲ್ಭಾಗವನ್ನು ಮಾತ್ರ ತಿಂದು ಅದರ ಬಿಳಿಯಾದ ಭಾಗ ಅಂದರೆ ತಿರುಳನ್ನು ಬಿಸುಟದೇ ಅದರಲ್ಲೇ ಸ್ವಾದಭರಿತ ದೋಸೆಯನ್ನು ತಯಾರಿಸಬಹುದಾಗಿದೆ. ಅಲ್ಲದೇ ತಿರುಳನ್ನು ನುಣ್ಣಗೆ ಬೀಸಿ ಮುಖಗಳಿಗೆ, ಕೈ ಕಾಲುಗಳಿಗೆ ಹಚ್ಚಿಕೊಂಡರೂ ತ್ಚಚೆಯ ಕಾಂತಿಯು ಹೆಚ್ಚುತ್ತದೆಂದು ಸಂಶೋಧನೆಯಿಂದ ತಿಳಿದು ಬಂದಿದೆ. ಹಾಗಾಗಿ ಇನ್ನು ಮುಂದೆ ತಿರುಳನ್ನು ಬಿಸುಟದಿರಿ.
ಬೇಕಾಗುವ ಸಾಮಗ್ರಿಗಳು
* ಅಕ್ಕಿ - ೧ ಲೋಟ
* ಕಲ್ಲಂಗಡಿ ಹಣ್ಣಿನ ತಿರುಳಿನ ಚೂರುಗಳು (ಬಿಳಿಭಾಗದ ಹೋಳುಗಳು) - ೨ ಲೋಟ
* ಮೆಂತೆ - ೧/೨ ಚಮಚ
* ಜೀರಿಗೆ - ೧/೨ ಚಮಚ
* ಉಪ್ಪು - ರುಚಿಗೆ ತಕ್ಕಷ್ಟು
* ತಂಗಿನೆಣ್ಣೆ - ಸ್ವಲ್ಪ
ತಯಾರಿಸುವ ವಿಧಾನ
* ಮೊದಲಿಗೆ ಅಕ್ಕಿ ಹಾಗೂ ಮೆಂತೆಯನ್ನು ನಾಲ್ಕು ಗಂಟೆಗಳ ಕಾಲ ನೆನೆಯಲು ಬಿಡಬೇಕು.
* ಕಲ್ಲಂಗಡಿ ಹಣ್ಣಿನ ಬಿಳಿ ಭಾಗವನ್ನು (ತಿರುಳನ್ನು) ಚೆನ್ನಾಗಿ ತೊಳೆದು ಸಣ್ಣ ಹೋಳುಗಳನ್ನಾಗಿಸಿಟ್ಟುಕೊಳ್ಳಬೇಕು.
* ಚೆನ್ನಾಗಿ ನೆನೆದ ಅಕ್ಕಿ ಹಾಗೂ ಮೆಂತೆಯನ್ನು ತಿರುಳಿನ ಚೂರುಗಳು ಹಾಗೂ ಜೀರಿಗೆಯ ಜೊತೆಗೆ ನುಣ್ಣಗೆ ರುಬ್ಬಬೇಕು.
* ನಂತರ ಈ ರುಬ್ಬಿದ ಮಿಶ್ರಣಕ್ಕೆ ದೋಸೆ ಹಿಟ್ಟಿನ ಹದಕ್ಕೆ ಬೇಕಾಗುವಷ್ಟು ನೀರನ್ನು ಹಾಕಿ, ಉಪ್ಪನ್ನು ಸೇರಿಸಬೇಕು.
* ಕಾವಲಿಯಲ್ಲಿ ಈ ಹಿಟ್ಟನ್ನು ತೆಳ್ಳಗೆ ಹೊಯ್ದು ಮೇಲಿನಿಂತ ಸ್ವಲ್ಪ ತೆಂಗಿನೆಣ್ಣೆಯನ್ನು ಬಿಟ್ಟು ಕೆಂಪಗೆ ಕಾಯಿಸಬೇಕು.
* ಬಿಸಿ ಬಿಸಿಯಾದ ದೋಸೆಯನ್ನು ಕಾಯಿ ಚಟ್ನಿಯೊಂದಿಗೆ ಸೇವಿಸಲು ಬಲು ರುಚಿಕರವಾಗಿರುತ್ತದೆ.
-ತೇಜಸ್ವಿನಿ.
ತೇಜಸ್ವಿನಿ, ಹಳ್ಳಿಲಿ ಒಬ್ರು ಪಂಡಿತರಿದ್ರು ನಮ್ಮ ಅಂಗಡೀಲಿ ಬಂದು ಸಂಜೆ ಮೂರ್ನಾಲ್ಕು ಘಂಟೆ ಕೂತ್ಕೊಳ್ಳೊರು..ಜಗಲಿ ಮೇಲೆ..ನಾವು-ಮಕ್ಕಳು ಕಲ್ಲಂಗಡಿ ತಿಂದು ಹಸಿರು ಬಿಳಿ ಸಿಪ್ಪೆ (ಸ್ವಲ್ಪ ಇನ್ನೂ ಕೆಂಪು ಇರೋಹಾಗೇನೆ) ಬಿಸಾಡಲು ಹೋದ್ರೆ.."ಲೋ ಮಕ್ಕಳಾ ಅದರ ಬಿಳಿ ಭಾಗನೂ ತಿನ್ರೋ ಕಣ್ಣು ತುಂಬಾ ಕಾಂತಿತುಂಬ್ಕೋತಾವೆ" ಅಂತಿದ್ರು....ಇದಕ್ಕೆ ಇರಬೇಕು...ಒಳ್ಲೆ ಮಾಹಿತಿ..ಖಂಡಿತಾ ಟ್ರೈ ಮಾಡಬಹುದು.
ReplyDeletenanagu idu gottu ondu sal maadidde chennagirutte..
ReplyDeleteteju.. thats kannadanalli haakidri ondu sari aagale try maadidde... besigenalli kallangaDi haNNu jasti sigutte illi... manege kallangaDi haNNu tandaga ee dose madtane irteeni..
ReplyDeleteThanks..
Nice, will definitely try this. Thanks for the recipe :-)
ReplyDeleteidna.. palya maadidru tumbaa ruchi.... turidu taalipittu maadidru ahaa!....hogtini aa hannanu taruvadakke...
ReplyDeletenammanelunu idra dose maadutteve...
ಉಪಯುಕ್ತ ಲೇಖನ. ನಾನು ಮು೦ದಿನ ಸ೦ಚಿಕೆ ಓದಿ ಕುತೂಹಲದಿ೦ದ ಹಿ೦ದಕ್ಕೆ ಬ೦ದೆ. ಬಹಳ ಚೆನ್ನಾಗಿ ತಿಳಿಸಿದ್ದೀರಿ. ಅಭಿನ೦ದನೆಗಳು. ಮನೆಯಲ್ಲಿ ಕಲ್ಲಂಗಡಿ ಇರುವುದರಿ೦ದ ಈಗಲೇ ಕಾರ್ಯ ಪ್ರವೃತ್ತ ಳಾಗುತ್ತಿದ್ದೇನೆ !
ReplyDelete